![](https://kannadadunia.com/wp-content/uploads/2023/12/cm-siddaramaiah-cm.jpg)
ಬೆಂಗಳೂರು : ಪ್ರಧಾನಿ ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ, ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರದಲ್ಲಿ ಮೋದಿ ಪ್ರಧಾನಿಯಾದ ಮೇಲೆ ಕಾರ್ಪೊರೇಟ್ ತೆರಿಗೆಯನ್ನು 30% ರಿಂದ 22% ಕ್ಕೆ ಇಳಿಸಿದರು. ಆದರೆ ಜನಸಾಮಾನ್ಯರು ಕಟ್ಟುವ ತೆರಿಗೆಯ ಪಾಲು ಏರಿಕೆಯಾಗಿದೆ. ಗ್ಯಾಸ್, ಪೆಟ್ರೋಲ್, ಡೀಸೆಲ್, ರಸಗೊಬ್ಬರ ದರ ಏರಿಕೆಯಾಗಿದೆ. ಜತೆಗೆ ತೆರಿಗೆಯೂ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಮೋದಿ ಅವರು ಮುಖ್ಯಮಂತ್ರಿಯಾಗಿದ್ದಾಗ ಶೇ.50 ರಷ್ಟು ತೆರಿಗೆ ಪಾಲು ರಾಜ್ಯಕ್ಕೆ ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಈಗ ನಾವು ಕಟ್ಟುವ ಪ್ರತಿ ನೂರು ರೂಗೆ 12-13 ರೂ ಮಾತ್ರ ವಾಪಾಸ್ ಬರುತ್ತಿದೆ. ಈ ಅನ್ಯಾಯಗಳ ಬಗ್ಗೆ ಸಂಸದರು ಬಾಯಿಯನ್ನೇ ಬಿಡುವುದಿಲ್ಲ ಎಂದರು.