ಜಾರ್ಸುಗುಡ: ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ ಮತ್ತು ಅವರು ತಮ್ಮನ್ನು ಒಬಿಸಿ ಎಂದು ಗುರುತಿಸಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.
ಒಡಿಶಾದಲ್ಲಿ ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೂರನೇ ಮತ್ತು ಸಮಾರೋಪ ದಿನದಂದು ಸಂಕ್ಷಿಪ್ತ ಭಾಷಣ ಮಾಡಿದ ರಾಹುಲ್ ಗಾಂಧಿ, ಮೋದಿ ಸಾಮಾನ್ಯ ಜಾತಿಗೆ ಸೇರಿದ ಕುಟುಂಬದಲ್ಲಿ ಜನಿಸಿದರು ಎಂದು ಹೇಳಿದರು. ಮೋದಿ ಅವರು ಒಬಿಸಿ ಎಂದು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಅವರು ತೆಲಿ ಜಾತಿಯ ಕುಟುಂಬದಲ್ಲಿ ಜನಿಸಿದರು, ಇದನ್ನು 2000 ರಲ್ಲಿ ಗುಜರಾತ್ನಲ್ಲಿ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಒಬಿಸಿ ಪಟ್ಟಿಗೆ ಸೇರಿಸಲಾಯಿತು. ಆದ್ದರಿಂದ, ಮೋದಿ ಜಿ ಹುಟ್ಟಿನಿಂದ ಒಬಿಸಿ ಅಲ್ಲ ಎಂದು ಕಾಂಗ್ರೆಸ್ ಸಂಸದ ಪ್ರತಿಪಾದಿಸಿದರು.
ಪ್ರಧಾನಿ ಒಬಿಸಿಗಳೊಂದಿಗೆ ಕೈಕುಲುಕುವುದಿಲ್ಲ, ಆದರೆ ಶತಕೋಟ್ಯಾಧಿಪತಿಗಳನ್ನು ಅಪ್ಪಿಕೊಳ್ಳುತ್ತಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.