ಬೆಂಗಳೂರು : ರಾಜ್ಯದಲ್ಲಿ ಬರಗಾಲದಿಂದ ಕಂಗಾಲಾಗಿರುವ ಕನ್ನಡಿಗರ ಕಷ್ಟ ಅರಿಯದೇಕಾವೇರಿ ವಿಚಾರದಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು ಮೌನಿಯಾದ್ದದ್ದು ಯಾಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಮಳೆಕೊರತೆಯಿಂದಾಗಿ ಕೆಆರ್ ಎಸ್ , ಕಬಿನಿ, ಹೇಮಾವತಿ ಸೇರಿದಂತೆ ಬಹುತೇಕ ಜಲಾಶಯಗಳ ಒಡಲು ಬರಿದಾಗಿದೆ, ಗಾಯದ ಮೇಲೆ ಬರೆ ಎಳೆದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮೇಲಿಂದ ಮೇಲೆ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸುತ್ತಲೇ ಇದೆ.
ಪ್ರಧಾನಿ ನರೇಂದ್ರ ಮೋದಿ ಅವರೇ, ಬರದಿಂದ ಕಂಗಾಲಾಗಿರುವ ಕನ್ನಡಿಗರ ಕಷ್ಟ ಅರಿತು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕಿದ್ದ ನೀವು ಕಾವೇರಿ ವಿಚಾರದಲ್ಲಿ ಮೌನಿಯಾದದ್ದು ಯಾಕೆ? ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂದಿದ್ದಾರೆ.