
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.
ಒಂದೂವರೆ ವರ್ಷದ ನಂತರ ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ 20 ಗಂಟೆಯಲ್ಲಿ ಬೆಂಗಳೂರು, ಮೈಸೂರಿನ 10 ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 33 ಸಾವಿರ ಕೋಟಿ ರೂಪಾಯಿ ವೆಚ್ಚದ 19 ಯೋಜನೆಗಳ ಲೋಕಾರ್ಪಣೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ನಾಳೆ ಮೈಸೂರಿನಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 9.25 ಕ್ಕೆ ದೆಹಲಿಯಿಂದ ಹೊರಟು 11.55 ಕ್ಕೆ ಬೆಂಗಳೂರು ತಲುಪಲಿದ್ದು, ನಂತರ ನಿರಂತರವಾಗಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.