alex Certify ರಾಜೀವ್ ಗಾಂಧಿ ಹತ್ಯೆ ಮಾಡಿದಂತೆ ಮೋದಿ ಹತ್ಯೆ ಬೆದರಿಕೆ: ಕೇರಳದಲ್ಲಿ ಹೈ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜೀವ್ ಗಾಂಧಿ ಹತ್ಯೆ ಮಾಡಿದಂತೆ ಮೋದಿ ಹತ್ಯೆ ಬೆದರಿಕೆ: ಕೇರಳದಲ್ಲಿ ಹೈ ಅಲರ್ಟ್

ತಿರುವನಂತಪುರಂ: ಆತ್ಮಾಹುತಿ ದಾಳಿಯ ಮೂಲಕ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ನಿಷೇಧಿತ ಉಗ್ರಗಾಮಿ ಸಂಘಟನೆಗಳ ಬೆದರಿಕೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್ ಕಚೇರಿಗೆ ಬೆದರಿಕೆ ಪತ್ರ ಬಂದಿದೆ. ಏಪ್ರಿಲ್ 24ರಂದು ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಆಗಮಿಸಲಿದ್ದಾರೆ. ಕೊಚ್ಚಿಗೆ ಆಗಮಿಸಲಿರುವ ಪ್ರಧಾನಿಯವರನ್ನು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಿದಂತೆ ಆತ್ಮಹತ್ಯಾ ಬಾಂಬರ್ ಮೂಲಕ ಹತ್ಯೆ ಮಾಡುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಕೇರಳ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಧಾನಿ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ ಒದಗಿಸಲಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...