
ಶಿವಮೊಗ್ಗ: ಚುನಾವಣಾ ರಾಜಕೀಯಕ್ಕೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಧನ್ಯವಾದ ಹೇಳಿದ್ದಾರೆ.
ಕೆ.ಎಸ್. ಈಶ್ವರಪ್ಪ ಅವರ ನಡೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಪಕ್ಷ ಸದಾ ನಿಮ್ಮೊಂದಿಗೆ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.
ಪ್ರಧಾನಿ ಮೋದಿ ಅವರ ಕರೆ ತೀವ್ರ ಕುತೂಹಲ ಮೂಡಿಸಿದೆ. ಈಶ್ವರಪ್ಪನವರದು ಪ್ರಬುದ್ಧ ನಡೆ ಎಂದು ಮೋದಿ ಶ್ಲಾಘಿಸಿದ್ದಾರೆ. ಪ್ರಧಾನಿಯವರೇ ಕರೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ ಈಶ್ವರಪ್ಪ, ನಿಮ್ಮ ಆಶೀರ್ವಾದದೊಂದಿಗೆ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದಾಗಿ ಭರವಸೆ ನೀಡಿದ್ದಾರೆ.
ಈಶ್ವರಪ್ಪನವರು ಚುನಾವಣಾ ರಾಜಕೀಯದಿಂದ ಸ್ವಯಂ ನಿವೃತ್ತಿ ಘೋಷಿಸಿ ಪಕ್ಷದ ಕುರಿತಾಗಿ ತಮ್ಮ ಬದ್ಧತೆಯನ್ನು ತೋರಿಸಿದ ಹಿನ್ನೆಲೆಯಲ್ಲಿ ನರೇಂದ್ರ ಮೋದಿಯವರೇ ದೂರವಾಣಿ ಕರೆ ಮಾಡಿ. ಈಶ್ವರಪ್ಪನವರ ಪ್ರಬುದ್ಧ ನಡೆಯನ್ನು ಪ್ರಶಂಶಿಸಿದ್ದು, ಪಕ್ಷ ಸದಾ ನಿಮ್ಮ ಜೊತೆ ಇದೆ ಎಂದು ಭರವಸೆ ನೀಡಿದ್ದಾರೆ.
ನಾನು ಪಕ್ಷದ ಸೂಚನೆ ಪಾಲಿಸುವ ಕಾರ್ಯಕರ್ತ. ಪಕ್ಷ ನನ್ನನ್ನು ರಾಜ್ಯ ಉಪಮುಖ್ಯಮಂತ್ರಿ ಹುದ್ದೆವರೆಗೆ ತೆಗೆದುಕೊಂಡು ಹೋಗಿದೆ. ನಾನು ಸಂಘಟನೆ ಕೆಲಸ ಮುಂದುವರೆಸುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.