alex Certify ರಾಮಮಂದಿರ ಉದ್ಘಾಟನೆಗೆ ಮುನ್ನ ದೇಶಾದ್ಯಂತ ‘ಸ್ವಚ್ಛ ಮಂದಿರ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮಮಂದಿರ ಉದ್ಘಾಟನೆಗೆ ಮುನ್ನ ದೇಶಾದ್ಯಂತ ‘ಸ್ವಚ್ಛ ಮಂದಿರ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯಾತ್ರಾ ಸ್ಥಳಗಳನ್ನು ಸ್ವಚ್ಛಗೊಳಿಸುವ ಉದ್ದೇಶದಿಂದ ದೇಶಾದ್ಯಂತ ‘ಸ್ವಚ್ಛ ಮಂದಿರ’ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಗೆ ಮುನ್ನ ಪ್ರಧಾನಿ ಮೋದಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಇನ್‌ ಸ್ಟಾ ಗ್ರಾಮ್‌ ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಅಯೋಧ್ಯೆಯನ್ನು ಭಾರತದ ಅತ್ಯಂತ ಸ್ವಚ್ಛ ನಗರವನ್ನಾಗಿ ಮಾಡಲು ನಾಗರಿಕರು ಒಂದಾಗಬೇಕು. ಮಕರ ಸಂಕ್ರಾಂತಿಯಿಂದ(ಜನವರಿ 14) ಸಣ್ಣ ಯಾತ್ರಾ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸಿ ಜನವರಿ 22 ರವರೆಗೆ ಮುಂದುವರಿಸಲು ಅವರು ರಾಷ್ಟ್ರವ್ಯಾಪಿ ಜನರಿಗೆ ಕರೆ ನೀಡಿದ್ದಾರೆ.

ಅಯೋಧ್ಯೆಯ ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದಾದ್ಯಂತದ ಜನರು ಈಗ ನಿಯಮಿತವಾಗಿ ಅಯೋಧ್ಯೆಗೆ ಭೇಟಿ ನೀಡುತ್ತಾರೆ, ಆದ್ದರಿಂದ ಅಯೋಧ್ಯೆಯ ನಿವಾಸಿಗಳು ರಾಮನಗರಿಯನ್ನು ಭಾರತದ ಸ್ವಚ್ಛ ನಗರವನ್ನಾಗಿ ಮಾಡಲು ಪ್ರತಿಜ್ಞೆ ಮಾಡಬೇಕು.

ಭಗವಾನ್ ರಾಮ ಎಲ್ಲರಿಗೂ ಸೇರಿದ್ದು, ಭಗವಾನ್ ರಾಮ ಬರುವಾಗ, ಒಂದೇ ಒಂದು ದೇವಾಲಯ ಅಥವಾ ಯಾತ್ರಾಸ್ಥಳವು ಅಶುದ್ಧವಾಗಿ ಉಳಿಯಬಾರದು. ಅಭಿಯಾನದಲ್ಲಿ ಸಂಸದರು, ಶಾಸಕರು ಮತ್ತು ಪಂಚಾಯತ್ ಪ್ರತಿನಿಧಿಗಳು ಸೇರಿದಂತೆ ಎಲ್ಲಾ ಚುನಾಯಿತ ಪ್ರತಿನಿಧಿಗಳು ಭಾಗವಹಿಸುತ್ತಾರೆ, ಅವರು ಸ್ವಚ್ಛತಾ ಅಭಿಯಾನದ ಯಶಸ್ಸಿಗೆ ಸಹಕರಿಸುತ್ತಾರೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...