alex Certify BIG NEWS: ನಾಳೆ ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ; ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ವೀಕ್ಷಣೆಗೆ ವ್ಯವಸ್ಥೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆ ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ; ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ವೀಕ್ಷಣೆಗೆ ವ್ಯವಸ್ಥೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 2 ರಂದು ಕೇಂದ್ರ ಬಜೆಟ್ ಗೆ ಸಂಬಂಧಿಸಿದಂತೆ ಭಾಷಣ ಮಾಡಲಿದ್ದು, ರಾಜ್ಯದಲ್ಲಿ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್ ಪರದೆಗಳ ಮೂಲಕ ಪ್ರಧಾನಿ ಭಾಷಣದ ನೇರ ಪ್ರಸಾರ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಮಾಹಿತಿ ನೀಡಿದ್ದಾರೆ.ಜಿಲ್ಲಾ ಕೇಂದ್ರಗಳಲ್ಲಿ ಸಂಸದರು, ಶಾಸಕರು, ಸಚಿವರು, ಆರ್ಥಿಕ ತಜ್ಞರು ಈ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದ ಜಿಲ್ಲಾ ಮತ್ತು ಪ್ರಮುಖ ಕೇಂದ್ರಗಳಲ್ಲಿ ಫೆಬ್ರವರಿ 5 ರಿಂದ 15 ರವರೆಗೆ ವಿಷಯ ತಜ್ಞರಿಂದ ಬಜೆಟ್ ಕುರಿತಾಗಿ ವಿಚಾರಗೋಷ್ಠಿ, ಸಂವಾದ ನಡೆಯಲಿದ್ದು, ಆರ್ಥಿಕ ತಜ್ಞರು, ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...