ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿಷದ ಹಾವು ಇದ್ದಂತೆ ಎಂದು ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ರಾಜ್ಯ ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ಮೋದಿಯವರ ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಖರ್ಗೆಯವರ ಸಭೆಗಳಿಗೆ ತಡೆಯೊಡ್ಡಬೇಕು. ಈ ರೀತಿ ಮಾತನಾಡದಂತೆ ಆದೇಶಿಸಬೇಕು ಎಂದು ಹೇಳಿದ್ದಾರೆ.
ಈ ಹಿಂದೆ ಗುಜರಾತ್ ಚುನಾವಣೆಯಲ್ಲಿ ಮೋದಿ 100 ತಲೆಗಳ ರಾವಣ ಎಂದು ಖರ್ಗೆ ಹೇಳಿದ್ದರು. ಈಗ ಗುಜರಾತಿನಲ್ಲಿ ಕಾಂಗ್ರೆಸ್ ಗೆ ಅಡ್ರೆಸ್ ಇಲ್ಲದಂತಹ ಪರಿಸ್ಥಿತಿಯಾಗಿದೆ. ರಾಜ್ಯದಲ್ಲಿಯೂ ಇದೇ ಪರಿಸ್ಥಿತಿ ಬರಲಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.