alex Certify ಪ್ರಧಾನಿ ಮೋದಿ ರಾಜ್ಯ ಪ್ರವಾಸ: ಸೆ. 2 ರಂದು ಮಂಗಳೂರಿಗೆ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ರಾಜ್ಯ ಪ್ರವಾಸ: ಸೆ. 2 ರಂದು ಮಂಗಳೂರಿಗೆ ಭೇಟಿ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಸೆ. 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಧಾನಿ ಅಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಮೋದಿ ಮಂಗಳೂರು ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು, ಪ್ರಧಾನಿ ಭದ್ರತಾ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿ ಪೂರ್ವ ಸಿದ್ಧತೆ ಮತ್ತು ಭದ್ರತೆ ವ್ಯವಸ್ಥೆ ಪರಿಶೀಲನೆ ನಡೆಸಲಿದ್ದಾರೆ.

ಮಂಗಳೂರು ಭೇಟಿಯ ವೇಳೆ ಮೋದಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, ರಾಜ್ಯ ಬಿಜೆಪಿ ನಾಯಕರೊಂದಿಗೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...