ನವದೆಹಲಿ: ಮುಂದಿನ ಮೂರು ತಿಂಗಳ ಕಾಲ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ನಡೆಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಪ್ರತಿ ತಿಂಗಳ ಕೊನೆಯ ಭಾನುವಾರ ಆಕಾಶವಾಣಿಯಲ್ಲಿ ಪ್ರಧಾನಮಂತ್ರಿ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮ ಪ್ರಸಾರವಾಗುತ್ತದೆ. ಫೆಬ್ರವರಿ 25ರಂದು ಕಾರ್ಯಕ್ರಮ ಪ್ರಸಾರವಾಗಿದ್ದು, ಮೂರು ತಿಂಗಳ ಕಾಲ ವಿರಾಮ ನೀಡುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಹಿನ್ನೆಲೆಯಲ್ಲಿ ತಮ್ಮ ರೇಡಿಯೋ ಕಾರ್ಯಕ್ರಮವನ್ನು ಪ್ರಧಾನಿಯವರು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದ್ದಾರೆ. ಮಾರ್ಚ್ ನಲ್ಲಿ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿ ಮೇ ತಿಂಗಳಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ. 2014ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೋದಿ ಪ್ರತಿ ತಿಂಗಳ ಕೊನೆಯ ಭಾನುವಾರ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡುತ್ತಾರೆ.
ಇದೇ ಫೆಬ್ರವರಿ 25ರಂದು 110 ನೇ ಸಂಚಿಕೆ ಪ್ರಸಾರವಾಗಿದೆ. 2019ರಲ್ಲಿ ಚುನಾವಣೆ ನೀತಿ ಸಂಹಿತೆ ಕಾರಣ ‘ಮನ್ ಕಿ ಬಾತ್’ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಮೂರು ತಿಂಗಳ ನಂತರ ಜೂನ್ ಕೊನೆ ವಾರ ಪುನರಾರಂಭವಾಗಿತ್ತು.