ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ರದ್ದು ಮಾಡಲಾಗಿದೆ. ಏಪ್ರಿಲ್ 5 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಬೇಕಿತ್ತು.
ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರಿಗೆ ಕೊರೊನಾ ಸೋಂಕು ತಗಲಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸವನ್ನು ರದ್ದು ಮಾಡಲಾಗಿದೆ. ಇಸ್ರೇಲ್ ಪ್ರಧಾನಿಯೊಂದಿಗೆ ಮೋದಿ ಕರ್ನಾಟಕಕ್ಕೆ ಬರಬೇಕಿತ್ತು. ಏಪ್ರಿಲ್ 5 ರಂದು ಮೂರು ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಳ್ಳಬೇಕಿತ್ತು.
ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಮೇಲ್ದರ್ಜೆಗೇರಿಸಿದ 155 ಐಟಿಐ ಉದ್ಘಾಟನೆ ಕಾರ್ಯಕ್ರಮ ಮತ್ತು ಬೆಂಗಳೂರು ಸಬರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಬೇಕಿತ್ತು. ಮೂರು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಬೇಕಿತ್ತು. ಆದರೆ, ಪ್ರಧಾನಮಂತ್ರಿ ಕಚೇರಿಯಿಂದ ನೀಡಿರುವ ಮಾಹಿತಿಯಂತೆ ಅಂದಿನ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಏಪ್ರಿಲ್ 24ರಂದು ಮೋದಿ ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.