alex Certify BIG NEWS: ಪ್ರಧಾನಿ ಮೋದಿ ಭೇಟಿಯಾದ ಬಿ.ಎಸ್.ವೈ. ಹೇಳಿದ್ದೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ಭೇಟಿಯಾದ ಬಿ.ಎಸ್.ವೈ. ಹೇಳಿದ್ದೇನು ಗೊತ್ತಾ…?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದೇನೆ. ಮುಂದಿನ ವಿಧಾನಸಭೆ ಚುನಾವಣೆ ಸಿದ್ಧತೆ ಬಗ್ಗೆ ಚರ್ಚಿಸಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಯಡಿಯೂರಪ್ಪ, ರಾಜ್ಯದ ರಾಜಕೀಯ ವಿದ್ಯಾಮಾನಗಳ ಕುರಿತಾಗಿ ಪ್ರಧಾನಿಯವರೊಂದಿಗೆ ಚರ್ಚೆ ನಡೆಸಿದ್ದೇನೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ರಾಜ್ಯ ಪ್ರವಾಸ ಮಾಡುತ್ತೇವೆ. ಸೆಪ್ಟೆಂಬರ್ 2 ರಂದು ಪ್ರಧಾನಿ ಮೋದಿ ಮಂಗಳೂರಿಗೆ ಬರುತ್ತಿದ್ದಾರೆ ಎಂದರು.

ಇಂದು ರಾತ್ರಿ 8 ಗಂಟೆಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗುತ್ತೇನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಸಮಯ ನಿಗದಿಯಾಗಿಲ್ಲ. ನಾಳೆ ಬೆಳಗ್ಗೆ 10 ಗಂಟೆಗೆ ದೆಹಲಿಯಿಂದ ಬೆಂಗಳೂರಿಗೆ ಹೊರಡುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಯಡಿಯೂರಪ್ಪ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ 20 ನಿಮಿಷ ಚರ್ಚೆ ನಡೆಸಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೆಚ್ಚು ಸಮಯವನ್ನು ರಾಜ್ಯಕ್ಕೆ ನೀಡಿ. ರಾಜ್ಯಕ್ಕೆ ಹೆಚ್ಚು ಭೇಟಿ ನೀಡುವಂತೆ ಪ್ರಧಾನಿಯವರಿಗೆ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಪಕ್ಷ ಸಂಘಟನೆ, ರಾಜ್ಯ ಪ್ರವಾಸದ ಬಗ್ಗೆ ಮೋದಿಯವರೊಂದಿಗೆ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ. ಎಲ್ಲಾ ನಾಯಕರು ಒಗ್ಗಟ್ಟಾಗಿ ರಾಜ್ಯ ಪ್ರವಾಸ ಮಾಡಲು ಮೋದಿ ಸೂಚನೆ ನೀಡಿದ್ದಾರೆ. ಅಲ್ಲದೇ, ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಯಡಿಯೂರಪ್ಪರೊಂದಿಗೆ ಮೋದಿ ಚರ್ಚೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...