ನವದೆಹಲಿ: ಆಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ತುರ್ತು ಸಭೆ ಕರೆದಿದ್ದಾರೆ.
ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಇಲಾಖೆ ಸಚಿವ ಎಸ್. ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರಿಂದ ಅಸ್ಥಿರತೆ ಉಂಟಾಗಿದೆ. ಇದರಿಂದ ಉಂಟಾಗುವ ಪರಿಣಾಮಗಳು ಮತ್ತು ಕೈಗೊಳ್ಳಬೇಕಿರುವ ಕ್ರಮಗಳ ಕುರಿತಂತೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ತುರ್ತು ಸಭೆ ಕರೆಯಲಾಗಿದೆ.