
ನವದೆಹಲಿ: ದೇಶದಲ್ಲಿ ಕೊರೋನಾ ಮೂರನೇ ಅಲೆ ಅಬ್ಬರ ಜೋರಾಗಿದೆ. ಕೊರೋನಾ ಜೊತೆಗೆ ರೂಪಾಂತರಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ ಹಿನ್ನಲೆಯಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತಾಗಿ ಪ್ರಧಾನಿ ಮೋದಿ ನಾಳೆ ಸಭೆ ನಡೆಸಲಿದ್ದಾರೆ.
ನಾಳೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಲಿದ್ದಾರೆ. ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬಿಗಿಕ್ರಮ, ಆಕ್ಸಿಜನ್, ವೈದ್ಯಕೀಯ ಮೂಲಸೌಕರ್ಯ ವ್ಯವಸ್ಥೆ ಬಲವರ್ಧನೆ, ಲಸಿಕೆ ನೀಡಿಕೆಗೆ ವೇಗ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ.
ನಾಳೆ ಸಂಜೆ 6.30 ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಎಲ್ಲಾ ರಾಜ್ಯಗಳ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳಿಂದ ಕೊರೋನಾ ತಡೆಗೆ ಕೈಗೊಳ್ಳಬೇಕಿರುವ ಪರಿಣಾಮಕಾರಿ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಮಾಹಿತಿ ಪಡೆದು ಸೂಚನೆ ನೀಡಲಿದ್ದಾರೆ.