ವ್ಯಾಟಿಕನ್ ಸಿಟಿ: ಇಟಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವ್ಯಾಟಿಕನ್ ಸಿಟಿಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿದ್ದಾರೆ.
ಈ ವೇಳೆ ಪೋಪ್ ಜೊತೆ ಮಾತುಕತೆ ನಡೆಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪೋಪ್ ಫ್ರಾನ್ಸಿಸ್ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದಾರೆ. ಪ್ರಧಾನಿ ಜೊತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಇದ್ದರು. ಸಭೆಯನ್ನು ಕೇವಲ 20 ನಿಮಿಷಗಳ ಕಾಲ ನಿಗದಿಪಡಿಸಲಾಗಿತ್ತು. ಆದರೆ, ಒಂದು ಗಂಟೆ ಕಾಲ ನಡೆಯಿತು ಎಂದು ಹೇಳಲಾಗಿದೆ.
ಪೋಪ್ ಫ್ರಾನ್ಸಿಸ್ ಅವರೊಂದಿಗೆ ಆತ್ಮೀಯ ಸಭೆ ನಡೆಸಲಾಯಿತು. ಅವರೊಂದಿಗೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲು ನನಗೆ ಅವಕಾಶ ಸಿಕ್ಕಿತು ಮತ್ತು ಭಾರತಕ್ಕೆ ಭೇಟಿ ನೀಡುವಂತೆ ಅವರನ್ನು ಆಹ್ವಾನಿಸಿದ್ದೇನೆ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜಿ20 ಶೃಂಗಸಭೆಗಾಗಿ ರೋಮ್‌ಗೆ ಎರಡು ದಿನಗಳ ಭೇಟಿ ನೀಡಿದ್ದಾರೆ.