ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಲೋಕಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ದೇಶಾದ್ಯಂತ ಮತ ಎಣಿಕೆ ಆರಂಭಿಕ ಸುತ್ತಿನಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಮುನ್ನಡೆ ಸಾಧಿಸಿದೆ.
ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುನ್ನಡೆ ಗಳಿಸಿದ್ದಾರೆ. ಎನ್.ಡಿ.ಎ. ಮೈತ್ರಿಕೂಟದ 271 ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಇಂಡಿಯಾ ಮೈತ್ರಿಕೂಟದ 201 ಅಭ್ಯರ್ಥಿಗಳು ಮುನ್ನಡೆ ಗಳಿಸಿದ್ದು, ಇತರರು 60 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಮೈಸೂರಿನಲ್ಲಿ ಯದುವೀರ್ ಒಡೆಯರ್ 7 ಸಾವಿರ ಮತಗಳ ಅಂತರದಿಂದ ಮುನ್ನಡೆ ಗಳಿಸಿದ್ದು, ಚಿಕ್ಕೋಡಿಯಲ್ಲಿ ಪ್ರಿಯಾಂಕ ಜಾರಕಿಹೊಳಿ 9 ಸಾವಿರ ಮತಗಳ ಅಂತರದಿಂದ ಮುನ್ನಡೆ ಗಳಿಸಿದ್ದಾರೆ.
ಉತ್ತರ ಕನ್ನಡದಲ್ಲಿ ಬಿಜೆಪಿಯ ಕಾಗೇರಿ 38,000 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ತುಮಕೂರಿನಲ್ಲಿ ವಿ. ಸೋಮಣ್ಣ ಮುನ್ನಡೆ ಗಳಿಸಿದ್ದಾರೆ.
ಉತ್ತರ ಪ್ರದೇಶದ ಮಥುರಾ ಕ್ಷೇತ್ರದಲ್ಲಿ ಹೇಮಾ ಮಾಲಿನಿ, ಹಾಸನದಲ್ಲಿ ಪ್ರಜ್ವಲ್ ರೇವಣ್ಣ 3500 ಮತಗಳಿಂದ ಮುನ್ನಡೆ ಗಳಿಸಿದ್ದಾರೆ. ಬಾಗಲಕೋಟೆಯಲ್ಲಿ ಗದ್ದಿಗೌಡರ್ ಮುನ್ನಡೆಯಲ್ಲಿದ್ದಾರೆ.