ಕಲಬುರಗಿ: ಪ್ರಧಾನಿ ಮೋದಿ ರಾಜ್ಯ ಪ್ರವಾಸಕ್ಕೆ ಕಾಂಗ್ರೆಸ್ ಪಕ್ಷ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಂಹ ಬರುತ್ತಿರುವುದಕ್ಕೆ ಕಾಂಗ್ರೆಸ್ ಗೆ ಭಯ ಶುರುವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ರಾಜ್ಯಕ್ಕೆ ಬಂದರೆ ಕಾಂಗ್ರೆಸ್ ಗೆ ಏನು ಸಮಸ್ಯೆ? ಮೋದಿ ಪದೇ ಪದೇ ಬರುವುದು ತಪ್ಪಾ ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ಮೋದಿ ಪ್ರವಾಸದಲ್ಲೂ ತಪ್ಪು ಹುಡುಕುವುದು ತಪ್ಪು. ಪ್ರಧಾನಮಂತ್ರಿ ಮೋದಿ ಮನೆಮನೆಗೂ ನೀರು ಕೊಟ್ಟಿದ್ದಾರೆ. ಬೆಳೆ ಪರಿಹಾರ ಕೊಟ್ಟಿದ್ದಾರೆ. ಮನಮೋಹನ ಸಿಂಗ್ ಅವಧಿಯಲ್ಲಿ ರಾಜ್ಯಕ್ಕೆ ಏನು ಕೊಟ್ಟಿದ್ದಾರೆ? ಈ ಬಗ್ಗೆ ಕಾಂಗ್ರೆಸ್ ನವರು ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲ್ ಹಾಕಿದ್ದಾರೆ.