
ಭೋಪಾಲ್: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ ದೇಶದ 80 ಕೋಟಿ ಜನರಿಗೆ 5 ಕೆಜಿ ಅಕ್ಕಿ ಉಚಿತವಾಗಿ ವಿತರಿಸುತ್ತಿದ್ದು, ಇದನ್ನು ಇನ್ನೂ 5 ವರ್ಷ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶದ ದುರ್ಗ್ ಮತ್ತು ರತ್ನಂನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಪ್ರಧಾನಿ, ಕೇಂದ್ರ ಸರ್ಕಾರ ವಿತರಿಸುತ್ತಿರುವ ಉಚಿತ ಪಡಿತರ ಯೋಜನೆಯನ್ನು ಐದು ವರ್ಷ ಕಾಲ ವಿಸ್ತರಿಸಲಾಗುವುದು. ಇದು ಮೋದಿ ಗ್ಯಾರಂಟಿ. ದೇಶದ 80 ಕೋಟಿ ಜನರಿಗೆ ಇದರಿಂದ ಪ್ರಯೋಜನ ಸಿಗಲಿದೆ ಎಂದು ಹೇಳಿದ್ದಾರೆ.