
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹಿಮಾಚಲ ಪ್ರದೇಶದ ಲೆಪ್ಚಾಗೆ ಆಗಮಿಸಿ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು.
ನಮ್ಮ ಕೆಚ್ಚೆದೆಯ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾವನ್ನು ತಲುಪಿದ್ದೇನೆ ಎಂದು ಪ್ರಧಾನಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಲೆಪ್ಚಾ ವಾಯುನೆಲೆಗೆ ಬಂದಿಳಿದ ಅವರು ದೀಪಾವಳಿಯಂದು ಹಿರಿಯ ಅಧಿಕಾರಿಗಳು ಮತ್ತು ಯೋಧರನ್ನು ಭೇಟಿ ಮಾಡಿದರು.
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಮತ್ತು ಭಾರತೀಯ ಸೇನೆಯ ಪಡೆಗಳು ಹಿಮಾಚಲ ಪ್ರದೇಶದಲ್ಲಿ LAC ಅನ್ನು ಸುರಕ್ಷಿತವಾಗಿರಿಸಲು ನಿಯೋಜಿಸಲಾಗಿದೆ.
ಇಂದು ಮುಂಜಾನೆ ಪ್ರಧಾನಿ ಮೋದಿ ರಾಷ್ಟ್ರಕ್ಕೆ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. “ಎಲ್ಲರಿಗೂ ದೀಪಾವಳಿಯ ಶುಭಾಶಯಗಳು! ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದ್ಭುತ ಆರೋಗ್ಯವನ್ನು ತರಲಿ ಎಂದು ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.