
3 ದಿನಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ವಿಶೇಷ ವಿಮಾನದಲ್ಲಿ ಫಿಲಿಡೆಲ್ಫಿಯಾಕ್ಕೆ ಆಗಮಿಸಿದ್ದಾರೆ.
ತಮ್ಮ ಉನ್ನತ ಮಟ್ಟದ ಭೇಟಿಯನ್ನು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತೀಯ ವಲಸಿಗರಿಂದ ಅದ್ದೂರಿ ಸ್ವಾಗತ ನೀಡಲಾಗಿದೆ.
ಮೂರು ದಿನಗಳ ಅಮೆರಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫಿಲಡೆಲ್ಫಿಯಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಕ್ವಾಡ್ ಶೃಂಗಸಭೆಯ ಅಂಚಿನಲ್ಲಿ ಅವರು ಯುಎಸ್ ಅಧ್ಯಕ್ಷ ಜೋ ಬಿಡೆನ್ ಮತ್ತು ಇತರ ವಿಶ್ವ ನಾಯಕರೊಂದಿಗೆ ಪ್ರತ್ಯೇಕ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.
ಆಸ್ಟ್ರೇಲಿಯಾದ ನಾಯಕ ಆಂಥೋನಿ ಅಲ್ಬನೀಸ್ ಮತ್ತು ಜಪಾನಿನ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಮೊದಲು ಭಾರತೀಯ ಪ್ರಧಾನಿ ದ್ವಿಪಕ್ಷೀಯ ಸಭೆಗಾಗಿ ಯುಎಸ್ ಅಧ್ಯಕ್ಷ ಜೋ ಬಿಡನ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ಮೋದಿ ಫಿಲಡೆಲ್ಫಿಯಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ವೇಳೆಗಾಗಲೇ ಭಾರತೀಯ ಸಮುದಾಯ ದೊಡ್ಡ ಸಂಖ್ಯೆಯಲ್ಲಿ ಸೇರಿತ್ತು. ಮೋದಿ ಆಗಮಿಸುತ್ತಿದ್ದಂತೆ ಅದ್ಧೂರಿ ಸ್ವಾಗತ ನೀಡಿ ಸಂಭ್ರಮಿಸಿದ್ದು, ಮೋದಿ ಅನಿವಾಸಿ ಭಾರತೀಯರಿಗೆ ಧನ್ಯವಾದ ಹೇಳಿದ್ದಾರೆ.