alex Certify ಕೊರೊನಾ ಹೆಚ್ಚಳ ಹಿನ್ನಲೆ: ಮಹತ್ವದ ಸಭೆ ನಡೆಸಿದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಹೆಚ್ಚಳ ಹಿನ್ನಲೆ: ಮಹತ್ವದ ಸಭೆ ನಡೆಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಗುರುವಾರ ದೇಶದ ಕೊರೊನಾ ಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಸಭೆಯಲ್ಲಿ ಮೋದಿಗೆ ಅನೇಕ ವಿಷ್ಯಗಳ ಬಗ್ಗೆ ತಿಳಿಸಲಾಗಿದೆ.

ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಕೊರೊನಾ ಸ್ಥಿತಿಯನ್ನು ಪಡೆದಿದ್ದಾರೆ. ಔಷಧಿ ಕೊರತೆ ಹಾಗೂ ಲಸಿಕೆ ಕೊರತೆ ಬಗ್ಗೆಯೂ ಪ್ರಧಾನಿ ಮಾಹಿತಿ ಪಡೆದಿದ್ದಾರೆ. ಲಸಿಕೆ ವೇಗವನ್ನು ರಾಜ್ಯಗಳು ನಿಧಾನಗೊಳಿಸಬಾರದು ಎಂದು ಪ್ರಧಾನಿ ಸಭೆಯಲ್ಲಿ ಹೇಳಿದ್ದಾರೆ.

12 ರಾಜ್ಯಗಳ 1 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಲಾಯಿತು. ಹೆಚ್ಚು ಪ್ರಕರಣವಿರುವ ಜಿಲ್ಲೆಗಳ ಬಗ್ಗೆಯೂ ಮಾಹಿತಿ ನೀಡಲಾಯಿತು. ಆರೋಗ್ಯ ಸೇವೆಗಳ ಮೂಲಸೌಕರ್ಯಗಳನ್ನು ಸುಧಾರಿಸಲು ಅಗತ್ಯವಾದ ಅಂಶಗಳ ಬಗ್ಗೆ ರಾಜ್ಯಗಳಿಗೆ ನೆರವು ಮತ್ತು ಮಾರ್ಗದರ್ಶನ ನೀಡಬೇಕು ಎಂದು ಪ್ರಧಾನಿ ನಿರ್ದೇಶನ ನೀಡಿದರು.

ಈ ಸಭೆಯಲ್ಲಿ ಕೊರೊನಾ ತಡೆಗಟ್ಟುವಿಕೆಗೆ ತ್ವರಿತ ಮತ್ತು ಸಮಗ್ರ ಕ್ರಮಗಳ ಕುರಿತು ಚರ್ಚಿಸಲಾಗಿದೆ. ಈ ಸಭೆಯಲ್ಲಿ ಪ್ರಧಾನಿ ಔಷಧಿಗಳ ಲಭ್ಯತೆಯ ಬಗ್ಗೆ ಪರಿಶೀಲಿಸಿದರು. ರೆಮೆಡಿಸಿವಿರ್ ಸೇರಿದಂತೆ ಔಷಧಿಗಳ ಉತ್ಪಾದನೆ ಹೆಚ್ಚುತ್ತಿರುವ ಬಗ್ಗೆ ಅವರಿಗೆ ಮಾಹಿತಿ ನೀಡಲಾಯಿತು.

ಸುಮಾರು 17.7 ಕೋಟಿ ಲಸಿಕೆಗಳನ್ನು ರಾಜ್ಯಗಳಿಗೆ ಕಳುಹಿಸಲಾಗಿದೆ ಎಂದು ಪ್ರಧಾನಿಗೆ ಮಾಹಿತಿ ನೀಡಲಾಯಿತು. ರಾಜ್ಯಗಳಲ್ಲಿ ನಡೆಯುತ್ತಿರುವ ಲಸಿಕೆ ಅಭಿಯಾನದ ಬಗ್ಗೆ ಪ್ರಧಾನಿ ಪರಿಶೀಲಿಸಿದರು. 45 ವರ್ಷ ಮೇಲ್ಪಟ್ಟ ಸುಮಾರು ಶೇಕಡಾ 31 ರಷ್ಟು ಜನರಿಗೆ ಕನಿಷ್ಠ ಒಂದು ಡೋಸ್ ಲಸಿಕೆ ನೀಡಲಾಗಿದೆ. ಲಸಿಕೆ ವೇಗ ನಿಧಾನವಾಗಬಾರದು. ರಾಜ್ಯಗಳಿಗೆ ಸೂಚನೆ ನೀಡಬೇಕೆಂದು ಪ್ರಧಾನಿ ಹೇಳಿದ್ದಾರೆ. ಲಾಕ್ ಡೌನ್ ಜಾರಿಯಲ್ಲಿದ್ದರೂ ಲಸಿಕೆ ಅಭಿಯಾನ ನಡೆಯಬೇಕು. ಲಸಿಕೆ ಅಭಿಯಾನದಲ್ಲಿರುವ ಆರೋಗ್ಯ ಕಾರ್ಯಕರ್ತರಿಗೆ ಬೇರೆ ಕೆಲಸ ನೀಡಬಾರದು ಎಂದು ಪಿಎಂ ಸೂಚನೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...