ನವದೆಹಲಿ: ಪ್ರಧಾನಿ ಮೋದಿ ‘ಒಂದು ದೇಶ ಒಂದು ಪಡಿತರ ಚೀಟಿ’ ಯೋಜನೆ ಸೇರಿದಂತೆ 8 ಯೋಜನೆಗಳ ಪ್ರಗತಿ ಪರಿಶೀಲನೆ ಡನೆಸಿದ್ದಾರೆ.
37 ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬುಧವಾರ 1.26 ಲಕ್ಷ ಕೋಟಿ ರೂಪಾಯಿಗಳ ಒಟ್ಟು ವೆಚ್ಚದ 8 ಯೋಜನೆಗಳ ಪ್ರಗತಿ ಪರಿಶೀಲಿಸಿದರು.
14 ರಾಜ್ಯಗಳಲ್ಲಿ ‘ಒಂದು ದೇಶ ಒಂದು ಪಡಿತರ ಚೀಟಿ ಯೋಜನೆ’ಯ ಪ್ರಗತಿ ಪರಿಶೀಲಿಸಿದ ಅವರು, ಎಲ್ಲರಿಗೂ ಪಡಿತರ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ONORC ಯೋಜನೆಯನ್ನು ಪರಿಶೀಲಿಸಿ ನಾಗರಿಕರಿಗೆ ಯೋಜನೆಗಳ ವ್ಯಾಪಕ ಪ್ರಯೋಜನ ಒದಗಿಸಬೇಕು. ಅದನ್ನು ಖಚಿತಪಡಿಸಿಕೊಳ್ಳಲು ಕಾರ್ಯಕ್ರಮದ ಅಡಿಯಲ್ಲಿ ಅಭಿವೃದ್ಧಿಪಡಿಸಿದ ತಾಂತ್ರಿಕ ವೇದಿಕೆಯ ಉಪಯುಕ್ತತೆ ಅನ್ವೇಷಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪಿಎಂಒ ಕಚೇರಿಯಿಂದ ಮಾಹಿತಿ ನೀಡಲಾಗಿದೆ.
ಯೋಜನೆಗಳನ್ನು ಸಕಾಲಿಕವಾಗಿ ಪೂರ್ಣಗೊಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗ ಸಹಯೋಗದಲ್ಲಿ ಜನರಿಗೆ ಯೋಜನೆಯ ಪ್ರಯೋಜನ ದೊರಕಿಸಿಕೊಡಬೇಕೆಂದು ತಿಳಿಸಿದ್ದಾರೆ. ರೈಲ್ವೇ ಸಚಿವಾಲಯ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಎರಡು ವಿದ್ಯುತ್ ಸಚಿವಾಲಯದ ಯೋಜನೆಗಳ ಪ್ರಗತಿಯನ್ನೂ ಪರಿಶೀಲಿಸಲಾಗಿದೆ.