alex Certify ಬೆಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ: ಹೂವಿನ ಮಳೆಗರೆದ ಬಿಜೆಪಿ ಕಾರ್ಯಕರ್ತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ: ಹೂವಿನ ಮಳೆಗರೆದ ಬಿಜೆಪಿ ಕಾರ್ಯಕರ್ತರು

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.

ತೆರೆದ ವಾಹನದಲ್ಲಿ ಅಬ್ಬರದ ರೋಡ್ ಶೋ ನಡೆದಿದೆ. ನೈಸ್ ರೋಡ್ ಜಂಕ್ಷನ್ ನಿಂದ ಮೋದಿ ರೋಡ್ ಶೋ ಆರಂಭವಾಗಿದೆ. ವಿಶೇಷವಾಗಿ ಅಲಂಕೃತಗೊಂಡ ವಾಹನದಲ್ಲಿ ನೈಸ್ ರೋಡ್ ಜಂಕ್ಷನ್ ನಿಂದ ಸುಮನಹಳ್ಳಿವರೆಗೂ 5.3 ಕಿಲೋ ಮೀಟರ್ ರೋಡ್ ಶೋ ಸಾಗಲಿದೆ.

ಮೋದಿ ಅವರೊಂದಿಗೆ ಡಿ.ವಿ. ಸದಾನಂದ ಗೌಡ ಮತ್ತು ಛಲವಾದಿ ನಾರಾಯಣಸ್ವಾಮಿ ರೋಡ್ ಶೋನಲ್ಲಿ ಭಾಗವಹಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಮಿಂಚಿನ ಸಂಚಾರ ನಡೆಸಿದ್ದು, ಬಿಜೆಪಿ ಕಾರ್ಯಕರ್ತರು ಪ್ರಧಾನಿಯವರ ಮೇಲೆ ಹೂವಿನ ಮಳೆಗರೆದಿದ್ದಾರೆ. ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ಭಾರಿ ಭದ್ರತೆ ಕೈಗೊಳ್ಳಲಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ಸೇರಿದ ಅಪಾರ ಸಂಖ್ಯೆಯ ಜನ ಮೋದಿ, ಬಿಜೆಪಿ ಪರ ಘೋಷಣೆ ಕೂಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...