ನವದೆಹಲಿ: ಅಕ್ಟೋಬರ್ 22, 23 ರಂದು ರಷ್ಯಾದಲ್ಲಿ ಬ್ರಿಕ್ಸ್ ಶೃಂಗಸಭೆ ಆಯೋಜಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಇಂದಿನಿಂದ ಎರಡು ದಿನ ರಷ್ಯಾದ ಕಜಾನ್ ನಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯಲಿದೆ. ರಷ್ಯಾ –ಉಕ್ರೇನ್, ಇಸ್ರೇಲ್- ಹಮಾಸ್ ಯುದ್ಧ ನಿಲ್ಲಿಸುವ ಬಗ್ಗೆ ಪ್ರಧಾನಿ ಮೋದಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಪ್ರವಾಸದ ವೇಳೆ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಮಾತುಕತೆ ನಡೆಸಲಿದ್ದಾರೆ.
ಬ್ರಿಕ್ಸ್ ರಾಷ್ಟ್ರಗಳ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆ ಇದೆ. ಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಕೂಡ ಭಾಗವಹಿಸಲಿದ್ದಾರೆ.
ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟವಾಗಿರುವ ಬ್ರಿಕ್ಸ್ ಸಭೆಯಲ್ಲಿ ಇಥಿಯೋಪಿಯಾ, ಈಜಿಪ್ಟ್, ಇರಾನ್, ಯುಎಇ, ಸೌದಿ ಅರೇಬಿಯಾ ಸೇರಿಕೊಂಡಿರುವುದು ಆ ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಶೃಂಗಸಭೆಯಲ್ಲಿ ಆರ್ಥಿಕ ಅಭಿವೃದ್ಧಿ, ಸದಸ್ಯ ರಾಷ್ಟ್ರಗಳ ನಡುವಿನ ಸಹಕಾರ ಮತ್ತು ಹವಾಮಾನ ಬದಲಾವಣೆ ಕುರಿತಾದ ಚರ್ಚೆ ನಡೆಯಲಿದೆ.