ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷ ಪುಟಿನ್ ದೂರವಾಣಿ ಕರೆ: ಚಂದ್ರಯಾನ, ದ್ವಿಪಕ್ಷೀಯ ಸಂಬಂಧ, ಜಿ20 ಶೃಂಗಸಭೆ ಬಗ್ಗೆ ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.

ಉಭಯ ನಾಯಕರು ದ್ವಿಪಕ್ಷೀಯ ಸಹಕಾರದ ಹಲವಾರು ವಿಷಯಗಳ ಪ್ರಗತಿ ಪರಿಶೀಲಿಸಿದರು.

ಅಧಿಕೃತ ಪ್ರಕಟಣೆಯ ಪ್ರಕಾರ, ಇಬ್ಬರು ನಾಯಕರು ದಕ್ಷಿಣ ಆಫ್ರಿಕಾದ ಜೋಹಾನ್ಸ್‌ ಬರ್ಗ್‌ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಬ್ರಿಕ್ಸ್ ಶೃಂಗಸಭೆ ಸೇರಿದಂತೆ ಪರಸ್ಪರ ಕಾಳಜಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗದಿರುವ ಬಗ್ಗೆ ಪುಟಿನ್ ತಿಳಿಸಿದ್ದು, ರಷ್ಯಾವನ್ನು ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಪ್ರತಿನಿಧಿಸುತ್ತಾರೆ ಎಂದು ಹೇಳಿದ್ದಾರೆ.

G20 ನ ಭಾರತದ ಅಧ್ಯಕ್ಷತೆಯಲ್ಲಿನ ಎಲ್ಲಾ ಉಪಕ್ರಮಗಳಿಗೆ ರಷ್ಯಾದ ನಿರಂತರ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಪುಟಿನ್ ಅವರಿಗೆ ಧನ್ಯವಾದ ಹೇಳಿದರು.

ಬಾಹ್ಯಾಕಾಶ ಪರಿಶೋಧನೆ, ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚಿಸಿದ್ದು, ಭಾರತದ ಚಂದ್ರಯಾನ-3 ದಕ್ಷಿಣ ಧ್ರುವದ ಬಳಿ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ್ದಕ್ಕಾಗಿ ಪುಟಿನ್ ಮತ್ತೊಮ್ಮೆ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳನ್ನು ತಿಳಿಸಿದರು. ಬಾಹ್ಯಾಕಾಶ ಪರಿಶೋಧನೆಯಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಇಚ್ಛೆಯನ್ನು ನಾಯಕರು ಪುನರುಚ್ಚರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read