alex Certify ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆಗೆ ಮೋದಿ: ನಾಳೆ ಶಾಲೆಗಳಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆಗೆ ಮೋದಿ: ನಾಳೆ ಶಾಲೆಗಳಿಗೆ ರಜೆ ಘೋಷಣೆ

ಧಾರವಾಡ: ನಾಳೆಯಿಂದ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ನಾಳೆ ಹುಬ್ಬಳ್ಳಿ ನಗರದ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಪಿಯುಸಿ ಮತ್ತು ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ. ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಉದ್ಘಾಟನೆ ಸಮಾರಂಭ ನಡೆಯಲಿದೆ. ಪ್ರಧಾನಿ ಮೋದಿ ಅವರು ಆಗಮಿಸುವುದರಿಂದ ಜನದಟ್ಟಣೆ ಹೆಚ್ಚಾಗುತ್ತದೆ. ಮುಂಜಾಗ್ರತೆ ಕ್ರಮವಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1 ರಿಂದ 10 ನೇ ತರಗತಿವರೆಗಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ದಿನಾಂಕ:12-01-2023 ರ ಗುರುವಾರದಂದು ಮಾತ್ರ ಒಂದು ದಿನ ರಜೆ ಘೋಷಿಸಲಾಗಿದೆ. ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಯಾವುದೇ ರಜೆ ನೀಡಿರುವದಿಲ್ಲ, ಎಂದಿನಂತೆ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...