ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಪ್ರವಾಸದಲ್ಲಿದ್ದಾರೆ. ಭಾನುವಾರ ಗುಜರಾತ್ನ ಬೆಟ್ ದ್ವಾರಕಾ ಮತ್ತು ಓಖಾ ಮುಖ್ಯಭೂಮಿಯನ್ನು ಸಂಪರ್ಕಿಸುವ ಸುಮಾರು ಎರಡೂವರೆ ಕಿಲೋಮೀಟರ್ ಉದ್ದದ ಕೇಬಲ್ ಸೇತುವೆಯನ್ನು ಪ್ರಧಾನಿ ಉದ್ಘಾಟಿಸಿದರು. ಇದಕ್ಕೂ ಮುನ್ನ ದ್ವಾರಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ದ್ವಾರಕಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಮುಳುಗಿರುವ ಪ್ರಾಚೀನ ನಗರವಾದ ದ್ವಾರಕಾ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ ಈ ಬಗ್ಗೆ ಪ್ರಧಾನಿ ಮೋದಿ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.
ಇದು ಭಗವಾನ್ ಶ್ರೀ ಕೃಷ್ಣನೊಂದಿಗೆ ನಿಕಟ ಸಂಪರ್ಕ ಹೊಂದಿರುವ ಪ್ರಾಚೀನ ನಗರವಾಗಿದೆ ಮತ್ತು ಭವ್ಯತೆ ಮತ್ತು ಸಮೃದ್ಧಿಯ ಕೇಂದ್ರವಾಗಿತ್ತು. ಪ್ರಧಾನಿ ಮೋದಿ ಅವರು ದ್ವಾರಕಾ ಭೇಟಿಯ ದೈವಿಕ ಕ್ಷಣಗಳನ್ನು ಚಿತ್ರಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಹಂಚಿಕೊಂಡಿರುವ ಪ್ರಧಾನಿ ಮೋದಿ, “ವಿಶೇಷ ದ್ವಾರಕಾ ಭೇಟಿಯ ದೈವಿಕ ಕ್ಷಣಗಳು” ಎಂದು ಬರೆದಿದ್ದಾರೆ. ಇಲ್ಲಿ ಏನೇ ನಡೆದರೂ ದ್ವಾರಕಾಧೀಶನ ಇಚ್ಛೆಯಂತೆಯೇ ನಡೆಯುತ್ತದೆ. ನಾನು ಸಮುದ್ರದಾಳಕ್ಕೆ ಹೋಗಿ ಪ್ರಾಚೀನ ದ್ವಾರಕವನ್ನು ನೋಡಿದೆ ಎಂದಿದ್ದಾರೆ.