
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 24 ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ.
ಪ್ರಸಕ್ತ ಸಾಲಿನ ಪಂಚಾಯತ್ ರಾಜ್ ಕಾರ್ಯಕ್ರಮವನ್ನು ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಆಚರಿಸಲು ಪ್ರಧಾನಿ ಕಾರ್ಯಾಲಯ ಮುಂದಾಗಿದ್ದು, ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ. ಶಿವಮೊಗ್ಗ ಜಿಲ್ಲೆಯ ಕೊಮ್ಮನಾಳ್ ಅಥವಾ ಹೊಳಲೂರು ಗ್ರಾಮಪಂಚಾಯಿತಿಗಳಲ್ಲಿ ಒಂದನ್ನು ಆಯ್ಕೆ ಮಾಡಿ ಪ್ರಧಾನಿ ಕಚೇರಿಗೆ ಜಿಲ್ಲಾಡಳಿತದಿಂದ ಮಾಹಿತಿ ನೀಡಲಾಗಿದೆ.
2018 ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗಕ್ಕೆ ಮೋದಿ ಪ್ರಚಾರಕ್ಕೆ ಆಗಮಿಸಿದ್ದರು. ಏಪ್ರಿಲ್ 24ರಂದು ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.