ಶಿವಮೊಗ್ಗ ಸಮೀಪದ ಹುಣಸೋಡು ಬಳಿ ಕಲ್ಲುಗಣಿಗಾರಿಕೆ ಸ್ಥಳದಲ್ಲಿ ಡೈನಮೈಟ್ ಸ್ಪೋಟಗೊಂಡು ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಪ್ರಾಣಹಾನಿ ನೋವು ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಪ್ರಾರ್ಥಿಸಿದ್ದು, ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ ಎಂದು ಮೋದಿ ತಿಳಿಸಿದ್ದಾರೆ.