ಕೊಲ್ಹಾಪುರ: ಕರ್ನಾಟಕದಲ್ಲಿ 2.5 ವರ್ಷಗಳ ಬಳಿಕ ಮುಖ್ಯಮಂತ್ರಿ ಬದಲಿಸಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕೊಲ್ಹಾಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 2.5 ವರ್ಷಗಳ ಆಡಳಿತದ ಬಳಿಕ ಸಿಎಂ ಸ್ಥಾನವನ್ನು ಈಗಿನ ಡಿಸಿಎಂಗೆ ಹಸ್ತಾಂತರಿಸುವ ಯೋಜನೆಯನ್ನು ಕಾಂಗ್ರೆಸ್ ಪಕ್ಷ ಹೊಂದಿದೆ. ಛತ್ತಿಸ್ ಗಢ ಮತ್ತು ರಾಜಸ್ಥಾನದಲ್ಲಿಯೂ ಅವರು ಈ ವ್ಯವಸ್ಥೆಯನ್ನು ಹೊಂದಿದ್ದರು ಎಂದು ಹೇಳಿದ್ದಾರೆ.
ಈ ಮೂಲಕ ಸಿದ್ದರಾಮಯ್ಯ ಆಡಳಿತದ 2.5 ವರ್ಷಗಳ ಬಳಿಕ ತಮ್ಮ ಮುಖ್ಯಮಂತ್ರಿ ಹುದ್ದೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಬಿಟ್ಟು ಕೊಡಬೇಕಾಗುತ್ತದೆ ಎಂದು ಸುಳಿವು ನೀಡಿದ್ದಾರೆ.