
ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಸತತ ಮೂರನೇ ಅವಧಿಗೆ ಭಾನುವಾರದಂದು ಪ್ರಮಾಣವಚನ ಸ್ವೀಕರಿಸಿದ್ದು, ಇಂದು ಪ್ರಧಾನಿ ಕಚೇರಿಗೆ ಆಗಮಿಸುತ್ತಲೇ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆಗೊಳಿಸುವುದಕ್ಕೆ ಸಂಬಂಧಪಟ್ಟ ಕಡತಕ್ಕೆ ತಮ್ಮ ಮೊದಲ ಸಹಿ ಮಾಡಿದ್ದಾರೆ.
ಈ ಮೂಲಕ ದೇಶದ ರೈತ ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು 9.3 ಕೋಟಿ ರೈತ ಕುಟುಂಬಗಳಿಗೆ ಒಟ್ಟು 20,000 ಕೋಟಿ ರೂಪಾಯಿಗಳಷ್ಟು ಮೊತ್ತವನ್ನು ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಾಕಲಾಗುತ್ತದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಬಹುಮತ ಗಳಿಸಿದ್ದು, ಬಿಜೆಪಿ ತನ್ನ ಸ್ವಂತ ಬಲದ ಮೇಲೆ 240 ಸ್ಥಾನಗಳನ್ನು ಗೆದ್ದಿತ್ತು. ಭಾನುವಾರ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, 71 ಮಂದಿ ಸಚಿವರು ಸಂಪುಟಕ್ಕೆ ಸೇರ್ಪಡೆಯಾಗಿದ್ದರು.