alex Certify BIG BREAKING: ಕೊರೋನಾ ಸವಾಲು ಗೆದ್ದ ಭಾರತ; ದೇಶವನ್ನುದ್ದೇಶಿಸಿ ಮೋದಿ ಭಾಷಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೋನಾ ಸವಾಲು ಗೆದ್ದ ಭಾರತ; ದೇಶವನ್ನುದ್ದೇಶಿಸಿ ಮೋದಿ ಭಾಷಣ

ನವದೆಹಲಿ: ಭಾರತದಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಿದ್ದು, ಲಸಿಕೆ ನೀಡಿಕೆ ಅಭಿಯಾನ ಯಶಸ್ವಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 279 ದಿನದಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಿದೆ. ಭಾರತ ಮೈಲಿಗಲ್ಲು ಸ್ಥಾಪಿಸಿದೆ ಎಂದು ಹೇಳಿದ್ದಾರೆ.

ಭಾರತದ ಈ ಸಾಧನೆ ಅಸಾಧಾರಣವಾದುದು. ಇದು ದೇಶವಾಸಿಗಳ ಸಾಧನೆ. ಇಡೀ ದೇಶದ ಜನತೆಯನ್ನು ನಾನು ಅಭಿನಂದಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಭಾರತ ಕೊರೊನಾ ವಿರುದ್ಧದ ಹೋರಾಟದಲ್ಲಿ ಯಶಸ್ವಿಯಾಗಿದೆ. ಕಠಿಣ ಗುರಿಯನ್ನು ಇಟ್ಟುಕೊಂಡು ಸಾಧನೆ ಮಾಡಿದೆ. ಬೇರೆ ದೇಶಗಳ ಜೊತೆ ಭಾರತದ ಲಸಿಕಾ ಅಭಿಯಾನ ಹೋಲಿಸಿದಾಗ ಸಾಧನೆ ಮಾಡಿದೆ. ನಮ್ಮ ದೇಶ ಕರ್ತವ್ಯವನ್ನು ಪಾಲಿಸಿದೆ. ಇದರಿಂದ ಯಶಸ್ಸು ಕೂಡ ಸಿಕ್ಕಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...