alex Certify ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ: ‘ಬೋಯಿಂಗ್ ಸುಕನ್ಯಾ’ ಕಾರ್ಯಕ್ರಮಕ್ಕೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ: ‘ಬೋಯಿಂಗ್ ಸುಕನ್ಯಾ’ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನ ದೇವನಹಳ್ಳಿ ಸಮೀಪ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಉದ್ಘಾಟನೆ, ವಿಮಾನಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜ ನೀಡುವ ‘ಬೋಯಿಂಗ್ ಸುಕನ್ಯಾ’ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 9:35 ಕ್ಕೆ ದೆಹಲಿಯಿಂದ ಹೋರಾಟ ಕಲಬುರಗಿ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದು, ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳುವರು. ಅಲ್ಲಿಂದ ಕಲಬುರಗಿಗೆ ವಾಪಸ್ ಆಗಿ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30 ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿ ಅಲ್ಲಿಂದ ದೇವನಹಳ್ಳಿಯ ಭಟ್ಟರಮಾರನಹಳ್ಳಿ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಉದ್ಘಾಟನೆ ನೆರವೇರಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...