
ನವದೆಹಲಿ: ರಷ್ಯಾ ರಾಜಧಾನಿ ಮಾಸ್ಕೋ ಬಳಿ ಸಂಗೀತ ಕಚೇರಿ ವೇಳೆ ಐಸಿಸ್ ಉಗ್ರರು ನಡೆಸಿದ ದಾಳಿಯಲ್ಲಿ ಕನಿಷ್ಠ 60 ಜನರನ್ನು ಕೊಂದಿದ್ದಾರೆ.
ಘಟನೆಯನ್ನು ಪ್ರಧಾನಿ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಮಾಸ್ಕೋದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತರ ಕುಟುಂಬಗಳೊಂದಿಗೆ ಇವೆ. ಈ ದುಃಖದ ಸಮಯದಲ್ಲಿ ಭಾರತವು ರಷ್ಯಾದ ಒಕ್ಕೂಟದ ಸರ್ಕಾರ ಮತ್ತು ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.