ನವದೆಹಲಿ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ಗೆ ಬೆಂಕಿ ತಗುಲಿ ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಘಟನೆಯಿಂದ ಮನಸ್ಸು ದುಃಖಿತವಾಗಿದೆ. ಮುಗ್ದ ಮಕ್ಕಳನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪ ಸೂಚಿಸುತ್ತೇನೆ. ಈ ಅಗಾಧವಾದ ದುಃಖ ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಎಂದು ಮೋದಿ ಪ್ರಾರ್ಥಿಸಿದ್ದಾರೆ.
ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತ ಪರಿಹಾರ ಮತ್ತು ರಕ್ಷಣೆಗಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅಗ್ನಿ ದುರಂತದ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
हृदयविदारक! उत्तर प्रदेश में झांसी के मेडिकल कॉलेज में आग लगने से हुआ हादसा मन को व्यथित करने वाला है। इसमें जिन्होंने अपने मासूम बच्चों को खो दिया है, उनके प्रति मेरी गहरी शोक-संवेदनाएं। ईश्वर से प्रार्थना है कि उन्हें इस अपार दुख को सहने की शक्ति प्रदान करे। राज्य सरकार की…
— PMO India (@PMOIndia) November 16, 2024