
ನವದೆಹಲಿ: ಪ್ರಧಾನಿ ಮೋದಿ ಇಂದು 82 ನೇ ಆವೃತ್ತಿಯ ‘ಮನ್ ಕಿ ಬಾತ್’ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಮಾಸಿಕ ರೇಡಿಯೋ ಕಾರ್ಯಕ್ರಮದ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿರುವ ಅವರು ಮಹತ್ವದ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಇದು ಪ್ರಧಾನಿಯವರ ‘ಮನ್ ಕಿ ಬಾತ್’ನ 82ನೇ ಮಾಸಿಕ ರೇಡಿಯೋ ಕಾರ್ಯಕ್ರಮವಾಗಿದೆ.
ಪ್ರಧಾನ ಮಂತ್ರಿಯವರ ‘ಮನ್ ಕಿ ಬಾತ್’ ರೇಡಿಯೋ ಪ್ರಸಾರ ಸಾಮಾನ್ಯವಾಗಿ ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ. ಆದರೆ, ಈ ಬಾರಿ ಮೊದಲೇ ಪ್ರಸಾರವಾಗಲಿದೆ. ಈ ವಾರದ ಆರಂಭದಲ್ಲಿ ಟ್ವೀಟ್ ಮಾಡಿದ್ದ ಪ್ರಧಾನಿ, ಈ ತಿಂಗಳು 24 ರಂದು ‘ಮನ್ ಕಿ ಬಾತ್’ ಕಾರ್ಯಕ್ರಮ ನಡೆಯಲಿದೆ. ಈ ತಿಂಗಳ ಸಂಚಿಕೆಗಾಗಿ ನಿಮ್ಮೆಲ್ಲರ ಆಲೋಚನೆಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ ಎಂದು ತಿಳಿಸಿದ್ದರು.