ಮುಂಬೈ :ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಿವಸಮ್ಮಾನ್ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ಫೆಬ್ರವರಿ 19 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ್ ಅವರ ಜನ್ಮದಿನವಾದ ಫೆಬ್ರವರಿ 19ರಂದು ಸತಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಿವಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಛತ್ರಪತಿ ಶಿವಾಜಿ ಮಹಾರಾಜ್ ಅವರ 13 ನೇ ವಂಶಸ್ಥ ಛತ್ರಪತಿ ಉದಯನ್ ರಾಜೆ ಭೋಸಲೆ ಈ ಘೋಷಣೆ ಮಾಡಿದ್ದಾರೆ.
ಈ ಪ್ರಶಸ್ತಿಯನ್ನು ಸತಾರಾ ರಾಜಮನೆತನ ಮತ್ತು ಶಿವಭಕ್ತರು ಸ್ಥಾಪಿಸಿದ್ದಾರೆ ಮತ್ತು ಸೈನಿಕ್ ಶಾಲಾ ಮೈದಾನದಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಉದಯನ್ ರಾಜೆ ಪ್ರಸ್ತುತ ಬಿಜೆಪಿ ರಾಜ್ಯಸಭಾ ಸದಸ್ಯರಾಗಿದ್ದಾರೆ.