ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ವೇಗ ನೀಡಲಿದ್ದಾರೆ.
ಸೆಪ್ಟೆಂಬರ್ 14 ರಂದು ಪ್ರಮುಖ ರ್ಯಾಲಿಗಳನ್ನು ನಿಗದಿಪಡಿಸಲಾಗಿದೆ. ಮೆಗಾ ರ್ಯಾಲಿಗಳೊಂದಿಗೆ ಜಮ್ಮುವಿನಲ್ಲಿ ಪ್ರಧಾನಿ ಮೋದಿ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ವೇಗ ನೀಡಲಿದ್ದಾರೆ. ಈಗಾಗಲೇ ಅಮಿತ್ ಶಾ ಸೇರಿ ಹಲವು ನಾಯಕರು ಪ್ರಚಾರ ನಡೆಸಿದ್ದು, ಪ್ರಧಾನಿ ಮೋದಿ ಕೂಡ ಪ್ರಚಾರ ಕೈಗೊಂಡಿರುವುದು ಬಿಜೆಪಿ ಪಾಳಯದಲ್ಲಿ ಉತ್ಸಾಹ ಹೆಚ್ಚಿಸಿದೆ.
ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕಾರವನ್ನು ಸ್ಥಾಪಿಸಿದರೆ ಮೆಟ್ರೋ ಸಂಪರ್ಕ ಮತ್ತು ಅಮ್ಯೂಸ್‌ಮೆಂಟ್ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೇ, ಪ್ರತಿ ಕುಟುಂಬದ ಹಿರಿಯ ಮಹಿಳೆಗೆ ಪ್ರತಿ ವರ್ಷ 18,000 ರೂಪಾಯಿ ನೀಡಲು ಬಿಜೆಪಿ ‘ಮಾ ಸಮ್ಮಾನ್ ಯೋಜನೆ’ಯನ್ನು ತರಲಿದೆ. ಬಿಜೆಪಿ ಉಜ್ವಲ ಯೋಜನೆಯಡಿ ವರ್ಷಕ್ಕೆ ಎರಡು ಉಚಿತ ಸಿಲಿಂಡರ್ ನೀಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.
ಪ್ರಗತಿ ಶಿಕ್ಷಾ ಯೋಜನೆಯಡಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆಯಾಗಿ ವರ್ಷಕ್ಕೆ 3000 ರೂ. ನೀಡಲಾಗುವುದು.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, 25, ಮತ್ತು ಅಕ್ಟೋಬರ್ 1 ರಂದು ಅಸೆಂಬ್ಲಿ ಚುನಾವಣೆಗೆ ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಫಲಿತಾಂಶ ಹೊರಬೀಳಲಿದೆ.