ಜೂ. 27 ಬೆಂಗಳೂರು –ಧಾರವಾಡ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 27 ರಂದು ಏಕಕಾಲದಲ್ಲಿ ಐದು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ಉದ್ಘಾಟಿಸಲಿದ್ದಾರೆ.

ಇದು ದೇಶದ ರೈಲ್ವೆ ಮೂಲಸೌಕರ್ಯದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಇಂಟಿಗ್ರಲ್ ಕೋಚ್ ಫ್ಯಾಕ್ಟರಿ(ICF) ನಿಂದ ಮೇಕ್ ಇನ್ ಇಂಡಿಯಾ ಉಪಕ್ರಮದ ಅಡಿಯಲ್ಲಿ ತಯಾರಿಸಲ್ಪಟ್ಟ ಈ ಅರೆ-ಹೈ-ವೇಗದ(Semi-High-Speed) ರೈಲುಗಳು ಭಾರತದಾದ್ಯಂತ ವಿವಿಧ ನಗರಗಳ ನಡುವೆ ಸಂಪರ್ಕವನ್ನು ಹೆಚ್ಚಿಸುತ್ತವೆ.

ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಗೋವಾ, ಪಾಟ್ನಾ-ರಾಂಚಿ, ಭೋಪಾಲ್-ಇಂಧೋರ್, ಭೋಪಾಲ್-ಜಬಲ್‌ಪುರ ಮತ್ತು ಬೆಂಗಳೂರು-ಹುಬ್ಬಳ್ಳಿ-ಧಾರವಾಡ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಚಲಿಸಲಿವೆ.

ಈ ಸೇರ್ಪಡೆಗಳೊಂದಿಗೆ ದೇಶದ ರೈಲು ಜಾಲದಲ್ಲಿ ಕಾರ್ಯನಿರ್ವಹಿಸುತ್ತಿರುವ ವಂದೇ ಭಾರತ್ ರೈಲುಗಳ ಒಟ್ಟು ಸಂಖ್ಯೆ 23 ಕ್ಕೆ ಏರಲಿದೆ.

ಬೆಂಗಳೂರು ನಗರದಿಂದ ಬೆಳಗ್ಗೆ 5:45ಕ್ಕೆ ಹೊರಡುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಧ್ಯಾಹ್ನ 12:40ಕ್ಕೆ ಧಾರವಾಡ ತಲುಪಲಿದೆ. ಮಧ್ಯಾಹ್ನ 1:15ಕ್ಕೆ ಧಾರವಾಡದಿಂದ ಹೊರಟು ರಾತ್ರಿ 8.10 ಕ್ಕೆ ಬೆಂಗಳೂರು ತಲುಪಲಿದೆ. ಯಶವಂತಪುರ, ದಾವಣಗೆರೆ, ಹುಬ್ಬಳ್ಳಿ, ಧಾರವಾಡದಲ್ಲಿ ನಿಲುಗಡೆ ಇರಲಿದೆ. 6 ಗಂಟೆ 55 ನಿಮಿಷ ಪ್ರಯಾಣದ ಸಮಯ ಆಗಿರುತ್ತದೆ.

ಕೆಎಸ್ಆರ್ ಬೆಂಗಳೂರು ನಗರ – ಹುಬ್ಬಳ್ಳಿ ಜನ ಶತಾಬ್ದಿ ಎಕ್ಸ್ ಪ್ರೆಸ್ ಬೆಂಗಳೂರಿನಿಂದ ಬೆಳಗ್ಗೆ 6 ಗಂಟೆಗೆ ಹೊರಟು ಮಧ್ಯಾಹ್ನ 1 ಗಂಟೆಗೆ ಹುಬ್ಬಳ್ಳಿ ತಲುಪಲಿದೆ. ಮಧ್ಯಾಹ್ನ 1:40ಕ್ಕೆ ಹುಬ್ಬಳ್ಳಿಯಿಂದ ಹೊರಡಲಿರುವ ಜನ ಶತಾಬ್ದಿ ರೈಲು ರಾತ್ರಿ 8:55 ಕ್ಕೆ ಕೆಎಸ್ಆರ್ ಬೆಂಗಳೂರು ತಲುಪಲಿದೆ. ಪ್ರಯಾಣದ ಸಮಯ 7 ಗಂಟೆ ಆಗಿರುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read