ಶ್ರೀರಾಮನ ಮೂರ್ತಿ ನೀಡಿದ ಕಾರ್ಯಕರ್ತನ ಪಾದ ಮುಟ್ಟಿ ಪ್ರಧಾನಿ ಮೋದಿ ನಮಸ್ಕರಿಸಿದ ವಿಡಿಯೋ ವೈರಲ್ ಆಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡಿದರು. ಈ ಸಮಯದಲ್ಲಿ ಘಟನೆ ಕಂಡುಬಂದಿದೆ. ಇದು ಇಂಟರ್ನೆಟ್ನಲ್ಲಿ ಸಂಚಲನ ಮೂಡಿಸಿದೆ. ಚುನಾವಣಾ ಸಭೆಯ ವೇದಿಕೆಯಲ್ಲಿ ಶ್ರೀರಾಮನ ವಿಗ್ರಹವನ್ನು ನೀಡಿದ ಬಿಜೆಪಿ ಕಾರ್ಯಕರ್ತನ ಪಾದಗಳನ್ನು ಪ್ರಧಾನಿ ಮೋದಿ ಸ್ಪರ್ಶಿಸಿದರು, ಇದನ್ನು ನೋಡಿ ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ. ಈ ವಿಡಿಯೋ ಇದೀಗ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದ್ದು, ಜನರು ಪ್ರಧಾನಿಯನ್ನು ಹಾಡಿಹೊಗಳುತ್ತಿದ್ದಾರೆ.
ಚುನಾವಣಾ ಸಭೆ ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಉನ್ನಾವೊಗೆ ಆಗಮಿಸಿದಾಗ, ಜಿಲ್ಲಾಧ್ಯಕ್ಷ ಅವಧೇಶ್ ಕಟಿಯಾರ್ ಅವರಿಗೆ ಶ್ರೀರಾಮನ ವಿಗ್ರಹವನ್ನು ನೀಡಿದರು. ಅವಧೇಶ್ ಕಟಿಯಾರ್ ಮೊದಲು ಪ್ರಧಾನಿ ಮೋದಿಯವರ ಪಾದಗಳನ್ನು ಮುಟ್ಟಿದರು, ನಂತರ ಪ್ರಧಾನಿ ಮೋದಿ ಅವರು ಈ ರೀತಿ ಮಾಡಬೇಡಿ ಎಂದು ಅವಧೇಶ್ ಕಟಿಯಾರ್ ಅವರ ಪಾದ ಮುಟ್ಟಿದ್ದಾರೆ. ಸೌಜನ್ಯಕ್ಕಾಗಿ ಪ್ರಧಾನಿ ಸ್ವತಃ ಅವಧೇಶ್ ಅವರ ಪಾದಗಳನ್ನು ಮುಟ್ಟಿದರು. ಬಿಜೆಪಿ ಮುಖಂಡ ಅರುಣ್ ಯಾದವ್ ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದುವರೆಗೆ ಸಾವಿರಾರು ಮಂದಿ ಈ ವಿಡಿಯೋವನ್ನು ವೀಕ್ಷಿಸಿದ್ದಾರೆ.