ನವದೆಹಲಿ: ಇಂದಿನಿಂದ ಎರಡು ದಿನ ಪ್ರಧಾನಿ ಮೋದಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಅವರು 15ನೇ ಬ್ರಿಕ್ಸ್ ದೇಶಗಳ ಶೃಂಗಸಭೆಯಲ್ಲಿ ಭಾಗವಹಿಸುವರು.
ಬ್ರಿಕ್ಸ್ ಸಂಘಟನೆಯ ದೇಶಗಳಾದ ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ನಾಯಕರು ಶೃಂಗಸಭೆಯಲ್ಲಿ ಉಪಸ್ಥಿತರಿರುವರು. ಐದು ದೇಶಗಳ ನಡುವೆ ಹಲವು ಮಹತ್ವದ ವಿಷಯಗಳ ಚರ್ಚೆ ನಡೆಸಲಾಗುವುದು.
ಜೋಹಾನ್ಸ್ ಬರ್ಗ್ ನಲ್ಲಿ ಬ್ರಿಕ್ಸ್ ದೇಶಗಳ ಸಭೆ ನಡೆಯಲಿದೆ. ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಅವರು ಅಲ್ಲಿಂದ ಗ್ರೀಕ್ ಗೆ ಪ್ರಯಾಣ ಬೆಳೆಸಲಿದ್ದಾರೆ. ಗ್ರೀಸ್ ಪ್ರವಾಸದ ನಂತರ ಭಾರತಕ್ಕೆ ಹಿಂತಿರುಗಲಿದ್ದಾರೆ.