alex Certify ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯ: ಬಿಜೆಪಿಯಿಂದ ಸೇವಾ ಕಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯ: ಬಿಜೆಪಿಯಿಂದ ಸೇವಾ ಕಾರ್ಯ

ನವದೆಹಲಿ: ಪ್ರಧಾನಿ ಮೋದಿ 71 ನೇ ವರ್ಷಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ ಹೇಳಿದ್ದಾರೆ.

ಸಂಪುಟ ಸಹೋದ್ಯೋಗಿಗಳಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಹಲವು ನಾಯಕರು ಶುಭಾಶಯ ಹೇಳಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂಗಳಾದ ಹೆಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಮೋದಿಗೆ ಶುಭಾಶಯ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಕಠಿಣ ಪರಿಶ್ರಮದಿಂದ ಸಂಕಲ್ಪವನ್ನು ಪೂರೈಸುವ ಕಲ್ಪನೆಯನ್ನು ನೀಡಿ ಅದನ್ನು ಸಾಕಾರವಾಗಿಸಿ ದೇಶವನ್ನು ಸಮರ್ಥವಾಗಿ ಮುನ್ನಡೆಸಿದ ಮಹತ್ವದ ನಾಯಕ ಮೋದಿ ಎಂದು ಕೊಂಡಾಡಿದ್ದಾರೆ.

ಅವರ ಹುಟ್ಟುಹಬ್ಬವನ್ನು ಬಿಜೆಪಿಯಿಂದ ಸೇವೆ ಮತ್ತು ಸಮರ್ಪಣಾ ದಿನವಾಗಿ ಆಚರಿಸಲಾಗುತ್ತಿದೆ. 20 ದಿನಗಳ ಕಾಲ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇವತ್ತು ದೇಶಾದ್ಯಂತ ಕೊರೋನಾ ಲಸಿಕೆ ಬೃಹತ್ ಅಭಿಯಾನ ಕೈಗೊಳ್ಳಲಾಗಿದೆ.

1950 ರಲ್ಲಿ ಗುಜರಾತ್‌ನಲ್ಲಿ ಜನಿಸಿದ ಮೋದಿ, ಚಿಕ್ಕ ವಯಸ್ಸಿನಲ್ಲಿಯೇ ಹಿಂದುತ್ವ ಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ(ಆರ್‌ಎಸ್‌ಎಸ್) ಸೇರಿದರು. ನಂತರ ಅವರಿಗೆ ಬಿಜೆಪಿ ಸಂಘಟನೆ ಜವಾಬ್ದಾರಿ ನೀಡಲಾಯಿತು.

2001 ರಲ್ಲಿ ಗುಜರಾತ್ ಮುಖ್ಯಮಂತ್ರಿಯಾದ ಮೋದಿ ಹಿಂದಿರುಗಿ ನೋಡಲಿಲ್ಲ. ತಮ್ಮ ನಾಯಕತ್ವದಲ್ಲಿ ನಡೆದ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಲಿಲ್ಲ, ರಾಜ್ಯದಲ್ಲಿ ಸತತ ಮೂರು ಅವಧಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತಂದರು. ನಂತರ 2014 ಮತ್ತು 2019 ರಲ್ಲಿ ಕೇಂದ್ರದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಅವರ ಪಾತ್ರ ಪ್ರಮುಖವಾಗಿದೆ.

ಬಿಜೆಪಿ ತನ್ನ ನಾಯಕನ 71 ನೇ ಹುಟ್ಟುಹಬ್ಬವನ್ನು ಆಚರಿಸಲು ಶುಕ್ರವಾರದಿಂದ ಸೇವೆ ಮತ್ತು ಸಮರ್ಪಣ 20 ದಿನಗಳ ಸಾರ್ವಜನಿಕ ಪ್ರಚಾರ ಆರಂಭಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...