ನವದೆಹಲಿ: ಇಂದಿನಿಂದ ಎರಡು ದಿನ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಫ್ರಾನ್ಸ್ ಮತ್ತು ಯುಎಇಗೆ ಭೇಟಿ ನೀಡಲಿದ್ದಾರೆ.
ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ ಆಹ್ವಾನದ ಮೇರೆಗೆ ಭೇಟಿ ನೀಡಲಿರುವ ಮೋದಿ ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಭಾರತ ಮತ್ತು ಫ್ರಾನ್ಸ್ ನಡುವಿನ ಸಂಬಂಧಕ್ಕೆ 25 ವರ್ಷ ಹಿನ್ನೆಲೆಯಲ್ಲಿ ಉಭಯ ನಾಯಕರ ನಡುವೆ ಹಲವು ಮಹತ್ವದ ವಿಷಯಗಳು ಚರ್ಚೆಯಾಗಲಿವೆ. ರಫೆಲ್ ಯುದ್ಧ ವಿಮಾನ, ಸಬ್ ಮೆರಿನ್ ಖರೀದಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು. ಉದ್ಯಮಿಗಳು, ಗಣ್ಯರು, ಅನಿವಾಸಿ ಭಾರತೀಯರ ಜತೆ ಮೋದಿ ಸಂವಾದ ನಡೆಸಲಿದ್ದಾರೆ.
ನಂತರ ಪ್ರಧಾನಿ ಮೋದಿ ಯುಎಇಗೆ ಭೇಟಿ ನೀಡಲಿದ್ದಾರೆ. ಯುಎಇ ಅಧ್ಯಕ್ಷ ಮೊಹಮ್ಮದ್ ಜಯೇದ್ ನಹ್ಯಾನ್ ಅವರನ್ನು ಭೇಟಿಯಾಗಲಿದ್ದಾರೆ. ಹಲವು ವಿಚಾರಗಳ ಬಗ್ಗೆ ಉಭಯ ನಾಯಕರ ನಡುವೆ ಸಮಾಲೋಚನೆ ನಡೆಯಲಿದೆ. ನಂತರ ಅಬುಧಾಬಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ. ಮೋದಿಯವರನ್ನು ಯುಎಇ ಅಧ್ಯಕ್ಷ, ಅರಸ ಮೊಹಮ್ಮದ್ ಜಯೇದ್ ನಹ್ಯಾನ್ ಸನ್ಮಾನಿಸಲಿದ್ದಾರೆ.