alex Certify ಮಂಗಳೂರು -ಗೋವಾ ವಂದೇ ಭಾರತ್ ರೈಲಿಗೆ ಡಿ. 30ರಂದು ಮೋದಿ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರು -ಗೋವಾ ವಂದೇ ಭಾರತ್ ರೈಲಿಗೆ ಡಿ. 30ರಂದು ಮೋದಿ ಚಾಲನೆ

ಮಂಗಳೂರು: ಮಂಗಳೂರು -ಗೋವಾ ಸೇರಿದಂತೆ ದೇಶದ ಆರು ಕಡೆಗಳಲ್ಲಿ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ. ಡಿ. 30ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.

ಮಂಗಳೂರು -ಮಡಗಾಂವ್ ಸೇರಿದಂತೆ ಆರು ವಂದೇ ಭಾರತ್ ಹಾಗೂ ಎರಡು ಅಮೃತ್ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ಇದೇ ಸಂದರ್ಭದಲ್ಲಿ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ನಿರ್ಮಾಣಗೊಂಡ 4 ಮತ್ತು 5ನೇ ಫ್ಲಾಟ್ ಫಾರಂ ಕೂಡ ಅಧಿಕೃತವಾಗಿ ಲೋಕಾರ್ಪಣೆಗೊಳ್ಳಲಿದೆ.

ಪ್ರಸ್ತಾಪಿತ ವೇಳಾಪಟ್ಟಿಯ ಪ್ರಕಾರ, ಮಂಗಳೂರು -ಗೋವಾ ನಡುವಿನ ವಂದೇ ಭಾರತ್ ರೈಲು ಮಂಗಳವಾರ ಹೊರತುಪಡಿಸಿ ಉಳಿದ ಆರು ದಿನಗಳಲ್ಲಿ ಸಂಚರಿಸಲಿದೆ. ಉಡುಪಿ ಮತ್ತು ಕಾರವಾರಗಳಲ್ಲಿ ಮಾತ್ರ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...