ಮೈಸೂರು: ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ನಿನ್ನೆ ರಾತ್ರಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೊಡಿದ್ದಾರೆ.
ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಬಂಡಿಪುರಕ್ಕೆ ತೆರಳಿದ ಪ್ರಧಾನಿ ಬಂಡಿಪುರ ಅರಣ್ಯದಲ್ಲಿ 2 ಗಂಟೆಗಳ ಕಾಲ ಸಫಾರಿ ನಡೆಸಲಿದ್ದಾರೆ. ಸಫಾರಿ ಮೂಲಕ ಹುಲಿ ಸಂರಕ್ಷಣೆಗೆ ಸಂದೇಶ ನೀಡಲಿರುವ ಅವರು ಸಫಾರಿ ಡ್ರೆಸ್ ಧರಿಸಿದ್ದಾರೆ. ತಮಿಳುನಾಡಿನ ಮಧುಮಲೈ ಆನೆ ಶಿಬಿರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮಾವುತ ದಂಪತಿ ಬೊಮ್ಮನ್ ಮತ್ತು ಬೆಳ್ಳಿ ಅವರನ್ನು ಭೇಟಿ ಮಾಡಲಿದ್ದಾರೆ.
ನಂತರ ಮೈಸೂರಿನಲ್ಲಿ ನಡೆಯಲಿರುವ ಪ್ರಾಜೆಕ್ಟ್ ಟೈಗರ್ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಸಭಾಂಗಣದಲ್ಲಿ ಹುಲಿ ಗಣತಿ ವರದಿ ಬಿಡುಗಡೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ 50 ರೂಪಾಯಿ ಮೌಲ್ಯದ ವಿಶೇಷ ನಾಣ್ಯವನ್ನು ಪ್ರಧಾನಿ ಬಿಡುಗಡೆ ಮಾಡುವರು.