ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜ. 19ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅಂದು ನಿಗದಿಯಾಗಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿ ಸಭೆ ಮುಂದೂಡಲಾಗಿದೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಬೆಂಗಳೂರಿನ ಏರೋ ಸ್ಪೇಸ್ ಇಂಜಿನಿಯರಿಂಗ್ ಸ್ಪೆಷಾಲಿಟಿ, ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಜನವರಿ 19ರಂದು ನಿಗದಿಯಾಗಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿ ಸಭೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.