
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ನಾಗಪುರದಲ್ಲಿರುವ ಆರ್.ಎಸ್.ಎಸ್. ಮುಖ್ಯ ಕಚೇರಿಗೆ ಭಾನುವಾರ ಭೇಟಿ ನೀಡಲಿದ್ದಾರೆ.
ಪ್ರಧಾನಿಯೊಬ್ಬರು ಆರ್.ಎಸ್.ಎಸ್. ಕಚೇರಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲಾಗಿದೆ. ಆರ್ ಎಸ್ ಎಸ್ ಕಚೇರಿಯ ಸ್ಮೃತಿ ಮಂದಿರದಲ್ಲಿ ಆರ್.ಎಸ್.ಎಸ್. ಸಂಸ್ಥಾಪಕ ಡಾ.ಹೆಡಗೆವಾರ್ ಹಾಗೂ ಎರಡನೇ ಸರಸಂಘ ಚಾಲಕ ಗುರೂಜಿ ಗೋಳ್ವಾಲ್ಕರ್ ಅವರ ಸ್ಮಾರಕಕ್ಕೆ ಮೋದಿ ಗೌರವ ಸಲ್ಲಿಸಲಿದ್ದಾರೆ. ಆರ್.ಎಸ್.ಎಸ್. ನ ಬಹು ಮುಖ್ಯ ಯುಗಾದಿ ಸಂಭ್ರಮದಲ್ಲಿ ಭಾಗವಹಿಸಲಿದ್ದಾರೆ.
ನಂತರ ಪ್ರಧಾನಿ ಮೋದಿ ಅವರು ಡಾ.ಬಿ.ಆರ್. ಅಂಬೇಡ್ಕರ್ ಬೌದ್ಧ ದೀಕ್ಷೆ ಸ್ವೀಕರಿಸಿದ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಮಾಧವ ನೇತ್ರಾಲಯ ನವೀಕೃತ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.