ಬೆಂಗಳೂರು : ಚಂದ್ರಯಾನ- 3 ಯಶಸ್ಸಿನ ಹಿನ್ನೆಲೆ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಇಂದು ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಇಂದು ಬೆಳಗ್ಗೆ 6 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಪ್ರಧಾನಿ ವೇಳಾಪಟ್ಟಿ
ಬೆಳಗ್ಗೆ 5.55ಕ್ಕೆ ಎಚ್ಎಎಲ್ ಏರ್ಪೋರ್ಟ್ಗೆ ಮೋದಿ ಆಗಮನ
• ಬೆಳಗ್ಗೆ 6.30 ರವರೆಗೆ ಏರ್ಪೋರ್ಟ್ನಲ್ಲಿ ನಲ್ಲಿ ಮೋದಿಗೆ ಸ್ವಾಗತ
• ಬೆಳಗ್ಗೆ 7 ಗಂಟೆಗೆ ಇಸ್ರೊ ಕೇಂದ್ರಕ್ಕೆ ಭೇಟಿ
• ಬೆಳಗ್ಗೆ 8 ಗಂಟೆವರೆಗೆ ಇಸ್ರೊ ಕೇಂದ್ರದಲ್ಲಿಸಭೆ
• ಬೆಳಗ್ಗೆ 8.35ಕ್ಕೆ ಬೆಂಗಳೂರಿನಿಂದ ನವದೆಹಲಿಗೆ ವಾಪಸ್
ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ ಆಗಮಿಸಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಆದರೆ ಪ್ರಧಾನಿ ಮೋದಿ ರೋಡ್ ಶೋ ಇರಲ್ಲ ಎಂದು ಪೊಲೀಸ್ ಆಯುಕ್ತ ಬಿ. ದಯಾನಂದ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ, ಆದರೆ ವಿಚಾರವಾಗಿ ಅಧಿಕೃತವಾಗಿ ಮೋದಿ ರೋಡ್ ಶೋ ಇರಲ್ಲ. ಕೆಲ ಸ್ಥಳಗಳಲ್ಲಿ ಜನರು ಜಮಾಯಿಸುವ ಸಾಧ್ಯತೆ ಬಗ್ಗೆ ಮಾಹಿತಿ ಇದೆ ಎಂದರು.
ಭಾರತ ಚಂದ್ರಯಾನ – 3 ರ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ಭಾರತ ಮಾತ್ರವಲ್ಲದೆ ವಿಶ್ವದ ಮೂಲೆ ಮೂಲೆಗಳಿಂದ ಅಭಿನಂದನೆಗಳ ಸುರಿಮಳೆಯೇ ಹರಿದು ಬಂದಿದೆ. ಭಾರತದ ಇಸ್ರೋ ವಿಜ್ಞಾನಿಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಿದ್ದು, ಇಡೀ ವಿಶ್ವವೇ ಈಗ ಭಾರತದತ್ತ ಬೆರಗುಗಣ್ಣಿನಿಂದ ನೋಡುತ್ತಿದೆ.ಈ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಬರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಸಿದ್ಧತೆ ನಡೆಸಿದೆ.