alex Certify ವಿಶ್ವಸಂಸ್ಥೆಯಲ್ಲಿ ಇಂದು 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮೋದಿ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವಸಂಸ್ಥೆಯಲ್ಲಿ ಇಂದು 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮೋದಿ ಭಾಗಿ

ನ್ಯೂಯಾರ್ಕ್: 4 ದಿನಗಳ ಭೇಟಿಗಾಗಿ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ನ್ಯೂಯಾರ್ಕ್ ಗೆ ಆಗಮಿಸಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ.

ಅಮೆರಿಕದ ಅಧಿಕೃತ ಆಹ್ವಾನಿತರಾಗಿ ಪ್ರಧಾನಿಯವರ ಮೊದಲ ಭೇಟಿ ಇದಾಗಿದ್ದು, ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ. ವಿಶ್ವಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ, ಶ್ವೇತ ಭವನದಲ್ಲಿ ಅಮೆರಿಕ ಅಧ್ಯಕ್ಷರ ಔತಣಕೂಟ, ಅಮೆರಿಕ ಸರ್ಕಾರದ ಪರವಾಗಿ ಅಧಿಕೃತ ಔತಣಕೂಟ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಆಯೋಜಿಸಿರುವ ಔತಣಕೂಟ, ಅಮೆರಿಕ ಸಂಸತ್ತಿನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ, ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಭಾಷಣ, ಉದ್ಯಮಿಗಳೊಂದಿಗೆ ಸಂವಾದ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.

ಇಂದು ವಿಶ್ವಸಂಸ್ಥೆಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ನ್ಯೂಯಾರ್ಕ್ ನಲ್ಲಿ ವಿವಿಧ ಉದ್ಯಮಿಗಳು, ಕಂಪನಿಗಳ ಸಿಇಓ ಗಳನ್ನು ಭೇಟಿಯಾಗಲಿದ್ದಾರೆ. ನಂತರ ವಾಷಿಂಗ್ಟನ್ ಗೆ ಪ್ರಯಾಣ ಬೆಳೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...